Breaking
29 Jun 2026, Mon

ಉಡುಪಿಯಲ್ಲಿ ಬೈಕ್‌ ಸ್ಕಿಡ್ : ಸಹ ಸವಾರ ಮೃತ್ಯು, ಸವಾರನಿಗೆ ಗಂಭೀರ ಗಾಯ

ಉಡುಪಿ: ಬೈಕ್‌ ಸ್ಕಿಡ್ ಆಗಿ ಸಹಸವಾರ ಸ್ಥಳದಲ್ಲೇ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ಉಡುಪಿಯ ಮಣಿಪಾಲ- ಅಲೆವೂರು ರಸ್ತೆಯ ಮಂಚಿ ಇಳಿಜಾರಿನ ತಿರುವಿನಲ್ಲಿ ಸೆ. 06ರ ತಡರಾತ್ರಿ ನಡೆದಿದೆ.

ಮೃತರನ್ನು ಕಟಪಾಡಿ ನಿವಾಸಿ ಮೋಹನ್ (33) ಎಂದು ಗುರುತಿಸಲಾಗಿದೆ.

ಬೈಕ್ ಸವಾರ ಪ್ರದೀಪ್ ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಇವರಿಬ್ಬರು ಕಾಪುವಿನಿಂದ ಮಣಿಪಾಲ ಕಡೆಗೆ ಹೋಗಿ, ಹಿಂದಿರುಗಿ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಬೈಕ್ ಸ್ಕಿಡ್ ಆದ ರಭಸಕ್ಕೆ ಸಹಸವಾರ ಪೊದೆಗೆ ಎಸೆಯಲ್ಪಟ್ಟಿದ್ದು, ಆದಿತ್ಯವಾರ ಬೆಳಗ್ಗೆಯವರೆಗೆ ಯಾರು ನೋಡದ ಕಾರಣ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *