Breaking
22 Sep 2026, Tue

ಚಾರ್ಮಾಡಿ ಘಾಟಿನ 2ನೇ ತಿರುವಿನ ಬಳಿ ಸರಣಿ ಅಪಘಾತ

ಬೆಳ್ತಂಗಡಿ: ಸರಣಿ ಅಪಘಾತ ಸಂಭವಿಸಿ ಬಸ್ಸೊಂದರ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಉಜಿರೆ ಸಮೀಪದ ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟಿನ ಎರಡನೇ ತಿರುವಿನ ಬಳಿ ಸೆ.7 ರಂದು ಬೆಳಗ್ಗೆ ನಡೆದಿದೆ.

ಮೊದಲು ಕೊಟ್ಟಿಗೆಹಾರ ಕಡೆ ಗ್ಯಾಸ್ ಸಿಲಿಂಡರ್ ಹೊತ್ತೊಯ್ಯುತ್ತಿದ್ದ ಲಾರಿಯು ಉಜಿರೆ ಕಡೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿಗೆ ಡಿಕ್ಕಿಯಾಗಿದೆ.

ಬಳಿಕ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿಯ ಹಿಂಬದಿಯಲ್ಲಿ ಬರುತ್ತಿದ್ದ ಇನ್ನೊಂದು ಲಾರಿ ಗ್ಯಾಸ್ ಸಿಲಿಂಡರ್ ಕೊಂಡೊಯ್ಯುತ್ತಿದ್ದ ಲಾರಿಗೆ ಡಿಕ್ಕಿಯಾಗಿ ಈ ಸರಣಿ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಅಪಘಾತದಲ್ಲಿ ಕೆಎಸ್ಸಾರ್ಟಿಸಿ ಬಸ್ ಚಾಲಕ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಪಾಯದಿಂದ ಪಾರಾಗಿದ್ದಾನೆ ಅನ್ನುವ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *