ಬೆಳ್ತಂಗಡಿ : ತಾಲೂಕಿನ ಧರ್ಮಸ್ಥಳ ಗ್ರಾಮದ ಪಾಂಗಳದಲ್ಲಿ 2012 ಅ.9 ರಂದು ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವುದು ಆಕೆಯ ಮಾವ ವಿಠಲ್ ಗೌಡ ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ.

ಈ ಕುರಿತು ಬೆಳ್ತಂಗಡಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ವಿಠಲ್ ಗೌಡನನ್ನು ಮಂಪರ್ ಪರೀಕ್ಷೆ ಮಾಡಬೇಕು ಎಂದರು.
ಮಾತ್ರವಲ್ಲ ಪ್ರಕರಣ ಸಂಬಂಧ ಪೂರಕ ಸಾಕ್ಷಿಗಳನ್ನು ಸಂಗ್ರಹಿಸಿದ್ದು ಇದನ್ನು ದ.ಕ.ಎಸ್ಪಿಗೆ ಹೋಗಿ ದೂರು ಸಲ್ಲಿಸುವುದಾಗಿ ಹೇಳಿದ್ದಾರೆ.




