Breaking
12 May 2026, Tue

ಉಡುಪಿಯ ಜ್ಯುವೆಲ್ಲರಿ ವರ್ಕ್ ಶಾಪ್ ವೊಂದರಲ್ಲಿ ಕಳ್ಳತನ

ಉಡುಪಿ:  ಜ್ಯುವೆಲ್ಲರಿ ವರ್ಕ್ ಶಾಪ್ ವೊಂದಕ್ಕೆ ರಾತ್ರಿ ವೇಳೆ ನುಗ್ಗಿದ ಕಳ್ಳರು ಅಪಾರ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಉಡುಪಿ ನಗರದ ಚಿತ್ತರಂಜನ್ ಸರ್ಕಲ್ ಬಳಿ ಸೆ.8 ರಂದು ನಡೆದಿದೆ.

ಚಿನ್ನ ಮತ್ತು ಬೆಳ್ಳಿ ಕರಗಿಸುವ ‘ವೈಭವ್ ರಿಫೈನರ್’ ಎಂಬ ಅಂಗಡಿಯ ನಕಲಿ ಬೀಗ ಬಳಸಿ ಒಳನುಗ್ಗಿದ ಕಳ್ಳರು ಡ್ರಾವರ್ ನಿಂದ 600 ಗ್ರಾಮ ತೂಕದ ಚಿನ್ನದ ಗಟ್ಟಿ ಮತ್ತು ಗೋಲ್ಡ್ ಲಿಕ್ವಿಡ್ ಸೇರಿದಂತೆ ವಿವಿಧ ಸೊತ್ತುಗಳನ್ನು ಕಳವು ಮಾಡಿರುವುದಾಗಿ ತಿಳಿದುಬಂದಿದೆ.

ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭಿಸಬೇಕಾಗಿದೆ.

Leave a Reply

Your email address will not be published. Required fields are marked *