Breaking
24 Mar 2026, Tue

ಮಂಗಳೂರಿಗೆ ಉಚ್ಚ ನ್ಯಾಯಾಲಯದ ಸಂಚಾರಿ ಪೀಠ ಸ್ಥಾಪನೆ ಮಾಡುವಂತೆ ಮನವಿ

ಬಂಟ್ವಾಳ: ಮಂಗಳೂರಿಗೆ ರಾಜ್ಯ ಉಚ್ಚ ನ್ಯಾಯಾಲಯ ಸಂಚಾರಿ ಪೀಠ ಸ್ಥಾಪನೆ ಮಾಡುವಂತೆ ಕರ್ನಾಟಕ ವಿಧಾನ ಸಭೆ ಮಾನ್ಯ ವಿರೋಧ ಪಕ್ಷದ ನಾಯಕರಿಗೆ ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯರು ಪ್ರಭಾಕರ ಪ್ರಭು ಮನವಿ ಮಾಡಿಕೊಂಡಿದ್ದಾರೆ.

ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿನ ಜನಸಾಮಾನ್ಯರಿಗೆ ಸಂಬಂದಿಸಿದಂತೆ , ಜಮೀನು ಸಂಬಂದಪಟ್ಟ ವ್ಯಾಜ್ಯಗಳು, ಸಂಘ ಸಂಸ್ಥೆಗಳ ಪ್ರಕರಣಗಳು, ಕ್ರಿಮಿನಲ್ ಪ್ರಕರಣ, ಸರಕಾರಿ ಅಧಿಕಾರಿಗಳಿಗೆ ಸಂಬಂಧ ಪಟ್ಟ ದೂರುಗಳು, ಸೀವಿಲ್ ಸಂಬಂದಿಸಿದ ಸೇರಿದಂತೆ ಇತರ ಎಲ್ಲಾ ತರಹದ ವ್ಯಾಜ್ಯಗಳು ಜಿಲ್ಲೆಗಳಲ್ಲಿನ ನ್ಯಾಯಾಲಯಗಳಲ್ಲಿ ಇತ್ಯರ್ಥವಾಗದೇ ಮೇಲ್ಮನವಿ ಸಲ್ಲಿಸಲು ದೂರುದಾರರು ದೂರದ ಬೆಂಗಳೂರುನಲ್ಲಿರುವ ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಹೋಗಬೇಕಾಗುತ್ತದೆ. ಇದರಿಂದ ತುಂಬಾ ಜನರಿಗೆ ಸಕಾಲಕ್ಕೆ ಮೇಲ್ಮನವಿ ಸಲ್ಲಿಸಲು ಕಷ್ಟ ಸಾಧ್ಯವಾಗಿದೆ.


ಈಗಾಗಲೇ ಬೆಂಗಳೂರಿನಲ್ಲಿರುವ ಕೆಎಟಿ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸಿದ್ದು , ಈ ನ್ಯಾಯಾಲಯಕ್ಕೆ ಸಂಬಂಧಿಸಿದ ವ್ಯಾಜ್ಯಗಳ ಬಗ್ಗೆ ಮೇಲ್ಮನವಿ ಸಲ್ಲಿಸಲು ಸಂಬಂದಿಸಿದವರಿಗೆ ಅನೂಕೂಲವಾಗಿದೆ.
ಈಗಾಗಲೇ ಹುಬ್ಬಳ್ಳಿ- ಧಾರವಾಡ ಗಳ ಜನತೆಗೆ ಅನುಕೂಲ ವಾಗುವ ನಿಟ್ಟಿನಲ್ಲಿ ಧಾರವಾಡದಲ್ಲಿ ಹಾಗೂ ಉತ್ತರ ಕರ್ನಾಟಕ ಜನತೆಗೆ ಕಲ್ಬುರ್ಗಿ ಯಲ್ಲಿ ಸಂಚಾರಿ ಪೀಠ ಸ್ಥಾಪನೆ ಮಾಡಲಾಗಿದೆ. ಆದುದರಿಂದ ಕರಾವಳಿ ಭಾಗದ ಜನತೆಗೆ ಅನುಕೂಲ ಕ್ಕಾಗಿ ಮಂಗಳೂರಿನ ಜಿಲ್ಲಾಧಿಕಾರಿ ಹಳೆಯ ಕಟ್ಟಡದಲ್ಲಿ ಉಚ್ಚ ನ್ಯಾಯಾಲಯ ಸಂಚಾರಿ ಪೀಠ ಸ್ಥಾಪನೆ ಮಾಡಬೇಕೆಂದು ಈ ಮೂಲಕ ವಿನಂತಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *