Breaking
20 Sep 2026, Sun

ಉಜಿರೆ ಅನುಗ್ರಹ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನಿಂದ ಉಪನ್ಯಾಸ ಕಾರ್ಯಕ್ರಮ

ಉಜಿರೆ: ಸಾಹಿತ್ಯವು ವಿದ್ಯಾರ್ಥಿಯ ಭವಿಷ್ಯವನ್ನು ರೂಪಿಸುತ್ತದೆ. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ದೆಸೆಯಿಂದಲೇ ಓದು ಹಾಗು ಬರವಣಿಗೆಯ ಕಲೆಯನ್ನು ಬೆಳೆಸಿಕೊಳ್ಳಬೇಕು. ಸಾಹಿತ್ಯದ ಅಭಿರುಚಿಯು ನಮ್ಮ ಸುಂದರ ಜೀವನಕ್ಕೆ ಅಡಿಪಾಯವಿದಂತೆ ಎಂದು ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತನ ಅಧ್ಯಕ್ಷ ಡಿ. ಯದುಪತಿ ಗೌಡ ಹೇಳಿದರು.

ಅವರು ಸೆಪ್ಟಂಬರ್ 9ರಂದು ಉಜಿರೆ ಅನುಗ್ರಹ ಪದವಿಪೂರ್ವ ಕಾಲೇಜಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕಾಲೇಜಿನ ಕನ್ನಡ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ ಜ್ಞಾನಪೀಠ ಪ್ರಶಸ್ತಿ ಪುರಸೃತರ ಉಪನ್ಯಾಸ ಮಾಲೆಯ ಪ್ರಯುಕ್ತ ಶ್ರೀ ಗಿರೀಶ್ ಕಾರ್ನಡ್‌ರವರ ಕುರಿತು ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಸ್.ಡಿ.ಯ.ಮ್ ಕಾಲೇಜು (ಸ್ವಾಯತ್ತ) ಉಜಿರೆ ಇಲ್ಲಿನ ಕನ್ನಡ ಸಹಾಯಕ ಪ್ರಾಧ್ಯಾಪಕಿ ಭವ್ಯಶ್ರೀ ಆರ್. ಬಲ್ಲಾಳ್ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಮಾತನಾಡುತ್ತ ಗಿರೀಶ್ ಕಾರ್ನಡ್ ಮಹಾನ್ ಪ್ರತಿಭೆ ಕನ್ನಡ ಭಾಷೆಯನ್ನು ಕನ್ನಡ ಸಂಸ್ಕçತಿಯನ್ನು ಪ್ರಪಂಚಕ್ಕೆ ಪರಿಚಯಿಸಿದ ಹೆಗ್ಗಳಿಕೆ ಇವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ವಂ.ಫಾ.ವಿಜಯ್ ಲೋಬೋ ಪ್ರಾಸ್ತಾವಿಕವಾಗಿ ಮಾತನಾಡಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ್ನ ಬೆಳ್ತಂಗಡಿ ತಾಲೂಕು ಘಟಕದ ಕಾರ್ಯವೈಕರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಕಾಲೇಜು ಕನ್ನಡ ಸಂಘದ ಜೊತೆ ಕಾರ್ಯದರ್ಶಿ ವಿದ್ಯಾರ್ಥಿ ಕ್ರಿಸ್ಟಿನ್ ಜೋನ್ ಅಥಿತಿ ಪರಿಚಯ ಮಾಡಿದರು.ಕನ್ನಡ ಉಪನ್ಯಾಸಕ ಅರುಣ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published. Required fields are marked *