Breaking
19 Sep 2026, Sat

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯು ಬೆಂಗಳೂರಿನಲ್ಲಿ ಅರೆಸ್ಟ್

ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ 16 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ರಾಜೇಶ್ ಕುಮಾರ್ ಎಂದು ಗುರುತಿಸಲಾಗಿದೆ.

ಆರೋಪಿಯನ್ನು ಸೆಪ್ಟೆಂಬರ್ 7ರಂದು ಬೆಂಗಳೂರಿನ ಬನಶಂಕರಿ, ಇಟ್ಟಮಡು ಎಂಬಲ್ಲಿ ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಗಿದೆ.

ಮಣಿಪಾಲ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ, ಸಬ್ ಇನ್ಸ್ಪೆಕ್ಟರ್ ಅಕ್ಷಯ ಕುಮಾರಿ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿತ್ತು

Leave a Reply

Your email address will not be published. Required fields are marked *