Breaking
19 Sep 2026, Sat

ಕೂಳೂರಿನಲ್ಲಿ ರಸ್ತೆ ಗುಂಡಿ ಮುಚ್ಚುತ್ತಿರುವ ಎನ್ಎಚ್ ಅಧಿಕಾರಿಗಳು

ಮಂಗಳೂರು: ನಗರದ ಕೂಳೂರಿನಲ್ಲಿ ರಸ್ತೆ ಗುಂಡಿಗೆ ದ್ವಿಚಕ್ರ ಸವಾರೆಯೋರ್ವರು ಬಿದ್ದು ಲಾರಿ ಹರಿದು ಮೃತಪಟ್ಟ ಬೆನ್ನಲ್ಲೇ ಎಚ್ಚೆತ್ತ ಎನ್ಎಚ್ ಅಧಿಕಾರಿಗಳು ರಸ್ತೆ ಗುಂಡಿಯನ್ನು ಮುಚ್ಚಿ ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ.

ಇಂದು ಬೆಳಗ್ಗೆ ಎ.ಜೆ.ಆಸ್ಪತ್ರೆ ಸಿಬ್ಬಂದಿ ಮಾಧವಿ ಎಂಬ ಅಮಾಯಕ ಮಹಿಳೆ ಮೃತಪಟ್ಟ ಬಳಿಕ ಅಧಿಕಾರಿಗಳಿಗೆ ಈ ಬುದ್ಧಿ ಬಂದಿದೆ.

ಘಟನೆ ನಡೆದ ತಕ್ಷಣ ಸ್ಥಳಕ್ಕೆ ಆಗಮಿಸಿದ ಡಿಸಿಪಿ ರವಿಶಂಕರ್ ಅವರು, ‘ನಾವು ಎರಡೆರಡು ಬಾರಿ ಗುಂಡಿ ಮುಚ್ಚುವಂತೆ ಹೆದ್ದಾರಿ ಇಲಾಖೆಗೆ ನೋಟಿಸ್ ನೀಡಿದರೂ ಅವರು ನಿರ್ಲಕ್ಷ್ಯ ವಹಿಸಿದ್ದಾರೆ’ ಎಂದು ಅಸಹಾಯಕತೆ ತೋರಿದ್ದಾರೆ.

ಈ ಕೆಲಸ ಮೊದಲೇ ಆಗುತ್ತಿದ್ದರೆ, ಒಂದು ಪ್ರಾಣವಾದರೂ ಉಳಿಯುತ್ತಿತ್ತು.

Leave a Reply

Your email address will not be published. Required fields are marked *