Breaking
19 Sep 2026, Sat

ಪಣಂಬೂರಿನ ಅಮೆಝಾನ್ ಸುಗಂಧ ದ್ರವ್ಯ ತಯಾರಿಕಾ ಕಂಪೆನಿಯಲ್ಲಿ ಬೆಂಕಿ ಅವಘಡ

ಮಂಗಳೂರು: ಕೈಗಾರಿಕಾ ವಲಯೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಂಗಳೂರಿನ ಪಣಂಬೂರಿನಲ್ಲಿ ಸೆ. 10ರಂದು ನಡೆದಿದೆ.

ಪಣಂಬೂರಿನಲ್ಲಿ ಕಾರ್ಯಾಚರಿಸುತ್ತಿದ್ದ ಅಮೆಝಾನ್ ಸುಗಂಧ ದ್ರವ್ಯ ತಯಾರಿಕಾ ಕಂಪೆನಿಯಲ್ಲಿ ಇಂದು ಬೆಳಗ್ಗಿನ ವೇಳೆ ಸುಮಾರು 5 ಗಂಟೆಗೆ ಬೆಂಕಿ ಅವಘಡ ಸಂಭವಿಸಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಂಸಿಎಫ್, ಎನ್‌ಎಂ ಪಿಎ, ಮತ್ತು ಕದ್ರಿಯ ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿ ನಂದಿಸಿ, ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *