ಪುತ್ತೂರು: ನಗರದ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ವಾಹನಗಳ ವಿರುದ್ಧ ಸಂಚಾರಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ ಘಟನೆ ಸೆ.08ರಂದು ನಡೆದಿದೆ.
ಪುತ್ತೂರು ಮುಖ್ಯರಸ್ತೆಯಿಂದ ಕೊಂಬೆಟ್ಟು ಮೂಲಕ ಉಪ್ಪಿನಂಗಡಿ ರಸ್ತೆಯನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಈ ಭಾಗದಲ್ಲಿ ರಸ್ತೆಯುದ್ದಕ್ಕೂ ವಾಹನಗಳನ್ನು ಪಾರ್ಕಿಂಗ್ ಮಾಡಲಾಗಿದ್ದು, ಇದನ್ನು ಗಮನಿಸಿದ ಸಾರ್ವಜನಿಕರೊಬ್ಬರು ಇಲಾಖೆಗೆ ಮಾಹಿತಿ ನೀಡಿದ್ದರು.
ಈ ಬಗ್ಗೆ ತಕ್ಷಣ ಕಾರ್ಯಪ್ರವೃತ್ತರಾದ ಪುತ್ತೂರು ನಗರ ಪೊಲೀಸರು ವಾಹನ ಮಾಲಕರಿಗೆ ಎಚ್ಚರಿಕೆ ನೀಡಿ ವಾಹನಗಳನ್ನು ತೆರವು ಮಾಡಿ, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.




