ಉಡುಪಿ: ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಕುಂದಾಪುರ ಠಾಣೆಯ ಪೊಲೀಸರು ಬೇಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಅಮ್ರಕಲ್ಲು ನಿವಾಸಿ, ನಾರಾಯಣ ನಾಯ್ಕ (43)ನನ್ನು ಬಂಧಿಸಲಾಗಿದೆ.

ಈತ ಬ್ರಹ್ಮಾವರದ ಹಿಲಿಯಾಣ ಗ್ರಾಮದ ಆಮ್ರಕಲ್ಲು ಎಂಬಲ್ಲಿ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಶಂಕರನಾರಾಯಣ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಪೊಲೀಸರು ಆರೋಪಿ ನಾರಾಯಣ ನಾಯ್ಕನಿಂದ “ಮೈಸೂರು ಲ್ಯಾನ್ಸರ್ ವಿಸ್ಕಿ” ಎಂದು ಲೇಬಲ್ ಮಾಡಲಾದ 70 ಟೆಟ್ರಾ ಪ್ಯಾಕ್ ಮದ್ಯ ಮತ್ತು 430 ನಗದನ್ನು ವಶಪಡಿಸಿಕೊಂಡಿದ್ದಾರೆ.
ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ಸುಮಾರು 3,930 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.




