Breaking
29 Jun 2026, Mon

ಕುಂದಾಪುರದಲ್ಲಿ ರೈಲಿಗೆ ತಲೆಕೊಟ್ಟು ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಕುಂದಾಪುರ : ಅಪರಿಚಿತ ವ್ಯಕ್ತಿಯೋರ್ವರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಳವರ ಬ್ರಿಡ್ಜ್ ಕೆಳಗಡೆ ನಡೆದಿದೆ.

ವ್ಯಕ್ತಿಯ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸುಮಾರು 35 ರಿಂದ 40 ವಯಸ್ಸಿನ ವ್ಯಕ್ತಿಯಾಗಿರಬಹುದು ಎಂದು ಅಂದಾಜಿಸಲಾಗಿದೆ.

ಕುಂದಾಪುರ, ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಎಎಸ್ಐ ಲಕ್ಷ್ಮಣ್ ಪೂಜಾರಿ, ಹೆಡ್ ಕಾನ್ಸ್ಟೇಬಲ್ ರಾಘವೇಂದ್ರ, ಆರ್ ಪಿ ಎಫ್ ಸಿಬ್ಬಂದಿ ಸುಧೀರ್ ಶೆಟ್ಟಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ಕಾನೂನು ಪ್ರಕ್ರಿಯೆ ನಡೆಸಿದರು.

ಸ್ಥಳೀಯರ ಸಹಕಾರದೊಂದಿಗೆ ಮೃತದೇಹವನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *