Breaking
29 Jun 2026, Mon

ಚಿಕ್ಕಮಗಳೂರಿನಲ್ಲಿ ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

ಚಿಕ್ಕಮಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ನಿಲುವಾಗಿಲು ಗ್ರಾಮದಲ್ಲಿ ನಡೆದಿದೆ.

ಹರಿಹರಪುರ ಹೋಬಳಿಯ ನಿಲುಬಾಗಿಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡ್ತಾಳ್ ಗ್ರಾಮದ ನಿವಾಸಿ ಸುಶಾಂತ್(17) ಮೃತ ದುರ್ದೈವಿಯಾಗಿದ್ದಾನೆ.

ಕೊಪ್ಪ ಪಟ್ಟಣದ ಜಿಜೆಸಿ ಕಾಲೇಜಿನ ದ್ವಿತೀಯ ವರ್ಷದ ಪಿಯುಸಿ ವಿದ್ಯಾರ್ಥಿಯಾಗಿದ್ದ ಈತ ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಅತ್ಮಹತ್ಯೆಗೆ ಶರಣಾಗಿದ್ದಾನೆ.

ಹರಿಹರಪುರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *