ಬೆಂಗಳೂರು: ಹಿಂದುತ್ವ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಬೆಂಗಳೂರಿನಲ್ಲಿ ಬಸವನಗುಡಿ ಪೊಲೀಸರು ಬಂಧಿಸಿದ್ದಾರೆ.
ಮಂಡ್ಯದ ಮದ್ದೂರಿನಲ್ಲಿ ಗಣೇಶಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟದ ಹಿನ್ನೆಯಲ್ಲಿ ಅಲ್ಲಿನ ಪರಿಸ್ಥಿತಿ ಸದ್ಯ ಬೂದಿ ಮೆಚ್ಚಿದ ಕೆಂಡದ ಹಾಗೆ ಇದೆ.

ಈ ಘಟನೆ ಖಂಡಿಸಿ ಘಟನಾ ಸ್ಥಳಕ್ಕೆ ಪುನೀತ್ ತೆರಳುತ್ತಿದ್ದಾರೆ ಅನ್ನುವ ಖಚಿತ ಮಾಹಿತಿ ಮೇರೆಗೆ, ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನ ಬಸವನಗುಡಿ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯ ನ್ಯಾಯಾಲಯವು ಪುನೀತ್ ಕೆರೆಹಳ್ಳಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.




