Breaking
22 Mar 2026, Sun

ಹಾಸನದಲ್ಲಿ ಕುಡಿದ ಮತ್ತಿನಲ್ಲಿ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ : ಆರೋಪಿ ಪತಿ ಪರಾರಿ

ಹಾಸನ: ಪತಿಯೊಬ್ಬ ಕಂಠಪೂರ್ತಿ ಕುಡಿದು ಪತ್ನಿಗೆ ಚಾಕುವಿನಿಂದ ಇರಿದು ಕೊಂದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಹಿರಿಸಾವೆ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ಮಹಿಳೆಯನ್ನು ರೇಖಾ (38) ಎಂದು ಗುರುತಿಸಲಾಗಿದೆ. ಪತಿ ರಘು (40) ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ.

18 ವರ್ಷಗಳ ಹಿಂದೆ ಇಬ್ಬರು ಮದುವೆಯಾಗಿದ್ದರು. ಮೊದಲಿನಿಂದಲೂ ಆರೋಪಿ ಪ್ರತಿನಿತ್ಯ ಕಂಠಪೂರ್ತಿ ಕುಡಿದು ಬಂದು ಜಗಳವಾಡುತ್ತಿದ್ದ ಎನ್ನಲಾಗಿದೆ.

ಸೆ.10 ರಾತ್ರಿ ಇಬ್ಬರು ಗಂಡು ಮಕ್ಕಳು ಟ್ಯೂಷನ್ ಗೆ ತೆರಳಿದ್ದಾಗ ಪತ್ನಿಯೊಂದಿಗೆ ರಘು ಜಗಳ ತೆಗೆದಿದ್ದಾನೆ. ಜಗಳ ವಿಕೋಪಕ್ಕೆ ತಿರುಗಿ ರೇಖಾಳನ್ನು ಮನೆಯಿಂದ ಹೊರಗೆ ಎಳೆದು ಚಾಕುವಿನಿಂದ ಹತ್ಯೆ ಮಾಡಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಹಿರಿಸಾವೆ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *