Breaking
26 Mar 2026, Thu

ಸಂಪಾಜೆಯಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆ ಗೆ ಯತ್ನ

ಸುಳ್ಯ: ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸುಳ್ಯ ಸಮೀಪದ ಸಂಪಾಜೆ ಯಲ್ಲಿ ನಡೆದಿದೆ.

ಸಂಪಾಜೆ ಮೂಲದ ಯುವಕನೊಬ್ಬ, ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಒಬ್ಬ ಪರಿಚಿತ ವ್ಯಕ್ತಿಯಿಂದ ಮಾನಸಿಕವಾಗಿ ಕಿರುಕುಳ ಅನುಭವಿಸುತ್ತಿರುವುದಾಗಿ ಆರೋಪಿಸಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಅಂತ ಹೇಳಲಾಗುತ್ತಿದೆ.

ಕೂಡಲೇ ಮನೆಯವರು ಗಮನಿಸಿ ತಕ್ಷಣವೇ ಯುವಕನನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ಚಿಕಿತ್ಸೆ ಮುಂದುವರಿದಿದ್ದು, ವೈದ್ಯಕೀಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷೆ ಮಾಡಲಾಗುತ್ತಿದೆ.

Leave a Reply

Your email address will not be published. Required fields are marked *