ಬೆಳ್ತಂಗಡಿ: ಎರಡು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಪಣೆಜಾಲು ಸಮೀಪ ಸೆ.11 ರಾತ್ರಿ ನಡೆದಿದೆ.
ಗುರುವಾಯನಕೆರೆಯಿಂದ ಉಪ್ಪಿನಂಗಡಿ ಮಾರ್ಗವಾಗಿ ತೆರಳುತ್ತಿದ್ದ ಸ್ಕೂಟರ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ದ್ವಿಚಕ್ರ ವಾಹನದ ನಡುವೆ ಈ ಅಪಘಾತ ಸಂಭವಿಸಿದೆ.

ವಾಹನ ಸವಾರರಾದ ಆಕಾಶ್ ಹಾಗೂ ಗ್ರೇಷಿಯನ್ ಇಬ್ಬರಿಗೂ ಗಾಯಗಳಾಗಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳೀಯರಾದ ಸತೀಶ್ ಆಚಾರ್ಯ ಎಂಬವರು ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.
ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





