Breaking
20 Sep 2026, Sun

ಎಸ್ಐಟಿಯಲ್ಲಿ ದೂರು ದಾಖಲಿಸಿದ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಅಸಹಜ ಸಾವುಗಳ ಬಗ್ಗೆ ಎಸ್ಐಟಿ ತನಿಖೆ ತೀವ್ರಗೊಳಿಸುತ್ತಿರುವ ನಡುವೆಯೇ ಮತ್ತೊಂದು ದೂರು ದಾಖಲಾಗಿದೆ.

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮ್ಮರೋಡಿ ದೂರು ದಾಖಲು ಮಾಡಿದ್ದು ಧರ್ಮಸ್ಥಳ ಗ್ರಾಮಕ್ಕೆ ಸೇರಿದ ವಿವಿಧ ವಸತಿ ಗೃಹಗಳಲ್ಲಿ 2006ರಿಂದ 2010ರ ಅವಧಿಯಲ್ಲಿ ಸಂಭವಿಸಿದ್ದ ನಾಲ್ಕು ಅಪರಿಚಿತ ಸಾವುಗಳ ಕುರಿತು ಗಂಭೀರ ಆರೋಪ ಕೇಳಿಬಂದಿದೆ.

ಇವುಗಳು ಸಂಭಾವ್ಯ ಕೊಲೆ ಪ್ರಕರಣಗಳಾಗಿರುವ ಬಗ್ಗೆ ಅನುಮಾನವಿರುವ ಕಾರಣ ತನಿಖೆ ನಡೆಸುವಂತೆ ದೂರು ನೀಡಿದ್ದಾರೆ. ಆರ್ಐಟಿನಡಿ ಪಡೆದಿರುವ ದಾಖಲೆ ಆಧರಿಸಿ ದೂರು ನೀಡಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *