Breaking
19 Sep 2026, Sat

15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಇಂದು ಪ್ರಮಾಣವಚನ ಸ್ವೀಕಾರ

ನವದೆಹಲಿ: ಎನ್‌ಡಿಎ ಅಭ್ಯರ್ಥಿ, ಮಹಾರಾಷ್ಟ್ರದ ಮಾಜಿ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರು ಸೆ.12ರಂದು 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇಂದು ಬೆಳಗ್ಗೆ 10ಗಂಟೆಗೆ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿ, ಪದಗ್ರಹಣ ಮಾಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಬೋಧಿಸಲಿದ್ದಾರೆ.

ಇವರು ಸೆ.09ರಂದು ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ 452 ಮತಗಳಿಸುವ ಮೂಲಕ ಗೆಲವು ಸಾಧಿಸಿದ್ದರು.

ಈ ಕಾರ್ಯಕ್ರಮದಲ್ಲಿ ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ, ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಪಂಜಾಬ್ ರಾಜ್ಯಪಾಲ ಮತ್ತು ಚಂಡೀಗಢ ಆಡಳಿತಾಧಿಕಾರಿ ಗುಲಾಬ್ ಚಂದ್ ಕಟಾರಿಯಾ, ಜಾರ್ಖಂಡ್ ರಾಜ್ಯಪಾಲ ಸಂತೋಷ್ ಗಂಗ್ವಾರ್ ಮತ್ತು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.

Leave a Reply

Your email address will not be published. Required fields are marked *