Breaking
25 Sep 2026, Fri

ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿಗೆ ಲೈಂಗಿಕ ದೌರ್ಜನ್ಯ ಆರೋಪ: ಬಿಜೆಪಿ ಮುಖಂಡನ ಬಂಧನಕ್ಕೆ ಕಾಂಗ್ರೆಸ್ ಒತ್ತಾಯ

ಕುಂದಾಪುರ: ತಾಲೂಕಿನ ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿಗೆ ಲೈಂಗಿಕ ದೌರ್ಜನ್ಯ ನೀಡಿರುವ ಆರೋಪದಲ್ಲಿ ಬಿಜೆಪಿ ಮುಖಂಡ ನವೀನ್ ಚಂದ್ರ ಶೆಟ್ಟಿ ರಟ್ಟಾಡಿ ವಿರುದ್ಧ ದೂರು ದಾಖಲಾಗಿತ್ತು.

ಈ ಪ್ರಕರಣದಲ್ಲಿ ಆರೋಪಿಯ ಬಂಧನ ವಿಳಂಭವಾಗುತ್ತಿದ್ದು 2 ದಿನದಲ್ಲಿ ಬಂದಿಸದಿದ್ದಲ್ಲಿ ಠಾಣೆ ಎದುರು ಪ್ರತಿಭಟನೆ ಮಾಡುವುದಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ನಾಗೇಂದ್ರ ಪುತ್ರನ್ ಎಚ್ಚರಿಕೆ ನೀಡಿದ್ದಾರೆ.

ಧರ್ಮಸ್ಥಳದ ಧರ್ಮ ಸಂರಕ್ಷಣಾ ಯಾತ್ರೆಯ ಸಭೆಯ ಆಮಂತ್ರಣ ಪತ್ರಿಕೆ ನೀಡುವ ಕುರಿತು ಮಹಿಳೆ ಆಮಂತ್ರಣ ಪತ್ರಿಕೆಯನ್ನು ನೀಡಲು ನವೀನ್ಚಂದ್ರ ಶೆಟ್ಟಿ ಮನೆಗೆ ಹೋದಾಗ , ಆತ ಮಹಿಳೆಯ ಕೈಯನ್ನು ಸ್ವರ್ಶಿಸಿ ಆಹ್ವಾನ ಪತ್ರಿಕೆ ತೆಗೆದುಕೊಂಡಿದ್ದಾನೆ. ಇದರಿಂದ ಮಹಿಳೆಗೆ ಮುಜುಗರ ಉಂಟಾಗಿತ್ತೆಂದು ದೂರಿನಲ್ಲಿ ತಿಳಿಸಲಾಗಿದೆ.

ನಂತರ ಮಹಿಳೆ ಹೊರಡಲು ಸಿದ್ಧರಾದಾಗ ನವೀನ್ಚಂದ್ರ ಶೆಟ್ಟಿ ಎರಡು ನಿಮಿಷ ನಿಲ್ಲುವಂತೆ ಒತ್ತಾಯಿಸಿ, ಮಹಿಳೆ ಕುಳಿತ ಸೋಪಾದ ಪಕ್ಕದಲ್ಲಿ ಬಂದು ಕುಳಿತು, ಮಹಿಳೆಯನ್ನು ಹತ್ತಿರಕ್ಕೆ ಎಳೆದುಕೊಂಡು ಕೆನ್ನೆಗೆ ಮುತ್ತು ಕೊಟ್ಟಿರುವುದಾಗಿ ದೂರಲಾಗಿದೆ. ಇದರಿಂದ ಗಾಬರಿಗೊಂಡ ಮಹಿಳೆ ಅಲ್ಲಿಂದ ತಕ್ಷಣ ಎದ್ದು ಹೊರ ಬರುತ್ತಿರುವಾಗ, ನವೀನ್ಚಂದ್ರ ಶೆಟ್ಟಿ, ವಾಪಾಸು ಮನೆಗೆ ಬರುವಂತೆ ಹೇಳುತ್ತಾ ಹಿಂಬಾಲಿಸಿಕೊಂಡು ಬಂದಿರುವುದಾಗಿ ದೂರಲಾಗಿದೆ.

ಯುವತಿ ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ರಾಜಕೀಯ ಪ್ರಭಾವದಿಂದ ಕೇಸ್ ಮಾಡದಂತೆ ಒತ್ತಡವಿದ್ದ ಕಾರಣ ಕೇಸ್ ದಾಖಲಿಸಿರಲಿಲ್ಲ. ಬಳಿಕ ದೂರು ದಾಖಲಾಗಿದ್ದರೂ ಬಂಧಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭ ಗೋಪಾಲ, ಜಗನ್ನಾಥ, ರಾಘವೇಂದ್ರ, ಹರೀಶ್, ಕಿಶೋರ್, ಆದಿತ್ಯ, ರಾಜು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *