Breaking
25 Sep 2026, Fri

ಮನೆಯ 2ನೇ ಮಹಡಿಯಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿನಿ ಸಾವು

ಬೆಂಗಳೂರು: ಮನೆಯ ಎರಡನೇ ಮಹಡಿಯಿಂದ ವಿದ್ಯಾರ್ಥಿನಿಯೋರ್ವಳು ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಪ್ರಿಯಾಂಕಾ (19) ಎಂದು ಗುರುತಿಸಲಾಗಿದೆ.

ಈಕೆ ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.

ಬಿದ್ದ ರಭಸಕ್ಕೆ ಪ್ರಿಯಾಂಕಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಈ ಬಗ್ಗೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *