Breaking
25 Sep 2026, Fri

ಮಣಿಪಾಲದ ಮಂಚಿಕೆರೆಯಲ್ಲಿ ಮನೆಯ ಬಾಗಿಲು ಮುರಿದು ಕಳ್ಳತನ : ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ಕಳ್ಳರು ಪರಾರಿ

ಉಡುಪಿ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಪರಾರಿಯಾದ ಘಟನೆ ಉಡುಪಿ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮಂಚಿಕೆರೆ ಎಂಬಲ್ಲಿ ನಡೆದಿದೆ.

ಮಂಚಿಕೆರೆಯ ನಿವಾಸಿಯಾಗಿರುವ ಪ್ರವೀಣ್ ಸಪಳಿಗ ಎಂಬವರ ಮನೆಯಲ್ಲಿ ಕಳ್ಳರು ಕೈ ಚಳಕ ಮೆರೆದಿದ್ದು ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ.

ಪ್ರವೀಣ್ ಸಪಳಿಗ ಅವರು ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದು, ಬೆಳಿಗ್ಗೆ 8 ಗಂಟೆಗೆ ಮನೆಗೆ ಬೀಗ ಹಾಕಿ ಕೆಲಸಕ್ಕೆ ತೆರಳಿದ್ದರು. ಸಂಜೆ 5 ಗಂಟೆಗೆ ಮನೆಗೆ ಬಂದು ನೋಡುವಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

ಮಣಿಪಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *