Breaking
23 Mar 2026, Mon

ಚಿನ್ನ ಕರಗಿಸುವ ವರ್ಕ್ ಶಾಪ್ ನಲ್ಲಿ ನಡೆದ ಕಳ್ಳತನ ಪ್ರಕರಣದ ಬೇಧಿಸಿದ ಉಡುಪಿ ಪೊಲೀಸರು

ಉಡುಪಿ: ನಗರದ ಚಿತ್ತರಂಜನ್ ಸರ್ಕಲ್ ಬಳಿ ಇರುವ ಚಿನ್ನ ಕರಗಿಸುವ ವರ್ಕ್ ಶಾಪ್ ಮಂಗಳವಾರ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸೆ.9ರ ರಾತ್ರಿ ನಗರದ ಚಿತ್ತರಂಜನ್ ವೃತ್ತದ ವೈಭವ್ ಆಸಿಡ್ ಶಾಪ್ ಗೆ ನುಗ್ಗಿದ ಕಳ್ಳರು ಸುಮಾರು 95ಲಕ್ಷ ಮೌಲ್ಯದ ಚಿನ್ನದ ಗಟ್ಟಿ, ಬೆಳ್ಳಿ ಹಾಗೂ ನಗದು ಕಳವುಗೈದು ಪರಾರಿಯಾಗಿದ್ದರು.

ಈ ಪ್ರಕರಣದ ಬೆನ್ನು ಹತ್ತಿದ ಉಡುಪಿ ನಗರ ಠಾಣೆಯ ಪೊಲೀಸರು ಕೊಲ್ಲಾಪುರದಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಹಿಂದೆ ಇದೆ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೇ ಈ ಕೃತ್ಯದ ಮಾಸ್ಟರ್ ಮೈಂಡ್ ಎಂದು ತಿಳಿದುಬಂದಿದೆ. ಈತ ಅಂಗಡಿಯ ಡ್ರಾವರ್ ಮತ್ತು ಮುಖ್ಯ ಬಾಗಿಲಿನ ನಕಲಿ ಕೀ ತಯಾರಿಸಿ ಈ ಕೃತ್ಯ ನಡೆಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಈಗಾಗಲೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇನ್ನೋರ್ವ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದು ಆತನ ಪತ್ತೆಗಾಗಿ ಬಲೆ ಬೀಸಿದ್ದಾರೆ.

Leave a Reply

Your email address will not be published. Required fields are marked *