Breaking
9 May 2026, Sat

ಬಂಟ್ವಾಳದಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಆರೋಪ: ವ್ಯಕ್ತಿಯ ಬಂಧನ

ಬಂಟ್ವಾಳ: ಆಟವಾಡುತ್ತಿದ್ದ ಅಪ್ರಾಪ್ತೆಯನ್ನು ಅತ್ಯಾಚಾರಗೈದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಇರಾ ಗ್ರಾಮದ ಸೂತ್ರಬೈಲು ನಿವಾಸಿ ಅಬೂಬಕರ್ (50) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಕಿ ಆಟವಾಡುತ್ತಿದ್ದ ಸಂದರ್ಭ ಅಲ್ಲಿಗೆ ಬಂದ ನೆರೆಮನೆಯ ನಿವಾಸಿ ಅಬೂಬಕರ್ ಯಾರು ವಾಸ್ತವ್ಯವಿರದ ಮನೆಯ ಹಿಂಭಾಗಕ್ಕೆ ಆಕೆಯನ್ನು ಕರೆದುಕೊಂಡ ಹೋಗಿ ಬಲಾತ್ಕಾರವಾಗಿ ಲೈಂಗಿಕಕ್ರಿಯೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಬಾಲಕಿಯ ಪೋಷಕರು ನೀಡಿರುವ ದೂರಿನಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೊಪಿಯನ್ನು ಪೊಲೀಸರು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು ನ್ಯಾಯಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *