ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿನ ಎಳ್ಳಾರೆ ಗ್ರಾಮದ ಮಹಿಳೆಯ ಚಿನ್ನದ ಸರಕಳವು ಪ್ರಕರಣವನ್ನು ಪೊಲೀಸರು ಬೇಧಿಸಿ ಆರೋಪಿಯನ್ನು ಬಂಧಿಸಿ ಚಿನ್ನವನ್ನು ವಶ ಪಡಿಸಿಕೊಂಡಿದ್ದಾರೆ.
ಬೆಳಗಾವಿ ಮೂಲದ ಸುನಿಲ್ ರಮೇಶ್ ಲಮಾಣಿ (29) ಬಂಧಿತ ಆರೋಪಿಯಾಗಿದ್ದಾನೆ. ಕಳವು ಮಾಡಲಾದ ಈ ಚೈನಿನ ಮೌಲ್ಯ ಸುಮಾರು 1.75 ಲಕ್ಷ ಎಂದು ಅಂದಾಜಿಸಲಾಗಿದೆ.

ಸೆ.9 ರಂದು, ಎಳ್ಳಾರೆ ಗ್ರಾಮದ 80 ವರ್ಷದ ವೃದ್ಧೆ ಕುಮುದಾ ಶೆಟ್ಟಿ ಮನೆಯ ಅಂಗಳದಲ್ಲಿ ಕುಳಿತಿದ್ದಾಗ, ಅಪರಿಚಿತ ವ್ಯಕ್ತಿ ಹಲ್ಲೆ ನಡೆಸಿ 25 ಗ್ರಾಂ ಚಿನ್ನದ ರೋಪ್ ಚೈನ್ ಕಸಿದು ಪರಾರಿಯಾಗಿದ್ದ.
ಈ ವೇಳೆಗೆ ಕುಮುದ ಅವರಿಗೆ ಗಾಯಗಳಾಗಿದ್ದು ಅವರನ್ನು ಟಿಎಮ್ಪೈ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
ಸದ್ಯ ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




