ಶಿವಮೊಗ್ಗದಲ್ಲಿ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿ ಸಾವು

ಶಿವಮೊಗ್ಗ: ಅನಧಿಕೃತ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹಿರಿಯೋಗಿ ಗ್ರಾಮದಲ್ಲಿ ನಡೆದಿಸೆ.12ರ ರಂದು ನಡೆದಿದೆ.

ಕೋಡೂರು ಸಮೀಪದ ಹಿರಿಯೋಗಿ ಗ್ರಾಮದ ದೇವರಾಜ (47) ನಾಡ ಬಂದೂಕಿನಿಂದ ಗುಂಡ ಸಿಡಿದು ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಸಿಡಿದ ಗುಂಡಿನಿಂದ ದೇವರಾಜ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತಂತೆ ಮೃತ ದೇವರಾಜ ಅವರ ಪತ್ನಿ ನೀಡಿದ ದೂರಿನ ಆಧಾರದಲ್ಲಿ ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *