Breaking
24 Jun 2026, Wed

ಮಾಣಿಯಲ್ಲಿ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿ ಸಾವು

ಬಂಟ್ವಾಳ: ಪಾದಚಾರಿಯೊರ್ವರು ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಮಾಣಿಯಲ್ಲಿ ನಡೆದಿದೆ.

ಪುತ್ತೂರು ಬೀಟಿಗೆ ನಿವಾಸಿ ಶಂಶುಧ್ದೀನ್ (32) ಮೃತ ದುರ್ದೈವಿಯಾಗಿದ್ದಾರೆ

ಶಂಶುಧ್ದೀನ್ ಅವರು ಮಾಣಿ ಸಮೀಪದ ಗಡಿಯಾರ ಎಂಬಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ಸಂಬಂಧಿಕರ ಮನೆಯಲ್ಲಿದ್ದ ಇವರು ಹತ್ತಿರದ ಅಂಗಡಿ ಕಡೆಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ಕಾರೊಂದು ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ.

ಶಂಶುಧ್ದೀನ್ ಅವರಿಗೆ ತಲೆಯ ಭಾಗಕ್ಕೆ ಗಂಭೀರ ಪ್ರಮಾಣದ ಗಾಯವಾಗಿದ್ದು, ಕೂಡಲೇ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದ್ರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ವಿಟ್ಲ ಪೋಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *