ನವದೆಹಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಅವರು ಸೆ.12 ರಂದು ಪ್ರಮಾಣವಚನ ಸ್ವೀಕರಿಸಿದರು.
ನೂತನ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದ ಐತಿಹಾಸಿಕ ದರ್ಬಾರ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಅಧಿಕಾರ ಗೌಪ್ಯತೆ ಬೋಧಿಸಿದರು.

ಈ ಹಿಂದೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಆರ್.ವೆಂಕಟರಾಮನ್ ರಾಷ್ಟ್ರಪತಿಗಳಾಗಿ ಸೇವೆ ಸಲ್ಲಿಸಿದ್ದರು.
ಈ ಮೂಲಕ ರಾಧಾಕೃಷ್ಣನ್ ಅವರು ದೇಶದ 2ನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸಿದ ತಮಿಳುನಾಡಿನ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಉಪರಾಷ್ಟ್ರಪತಿಗಳಾದ ವೆಂಕಯ್ಯ ನಾಯ್ಡು, ಹಮೀದ್ ಅನ್ಸಾರಿ, ಪ್ರಧಾನಿ ನರೇಂದ್ರಮೋದಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಜೆ.ಪಿ.ನಡ್ಡ, ಲೋಕಸಭೆ ಸ್ಪೀಕರ್ ಓಂಬಿರ್ಲಾ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.




