Breaking
11 Aug 2026, Tue

ಉಪ್ಪಿನಂಗಡಿ ಪೆಟ್ರೋಲ್ ಬಂಕ್ ನಲ್ಲಿ ಪೈಂಟಿಂಗ್ ಮಾಡುತ್ತಿದ್ದ ಕಾರ್ಮಿಕನಿಗೆ ಕಾರು ಢಿಕ್ಕಿ:

ಉಪ್ಪಿನಂಗಡಿ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಏಣಿಗೆ ಕಾರು ಢಿಕ್ಕಿಯಾದ ಪರಿಣಾಮ ಕಾರ್ಮಿಕ ಕೆಳಕ್ಕೆ ಬಿದ್ದು ಗಾಯಗೊಂಡಿರುವ ಘಟನೆ ಉಪ್ಪಿನಂಗಡಿಯ ನೆಲ್ಯಾಡಿಯ ಎಚ್ ಪಿ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ.

ಗಾಯಗೊಂಡವರನ್ನು ಬಜತ್ತೂರು ನಿವಾಸಿ ಹರ್ಷಿತ್ ಕುಮಾರ್ (27) ಎಂದು ಗುರುತಿಸಲಾಗಿದೆ.

ಹರ್ಷಿತ್ ಕುಮಾರ್ ಹಾಗೂ ಚೇತನ್ ಎಂಬವರು ಪೆಟ್ರೋಲ್ ಬಂಕ್ ನಲ್ಲಿ ಪೈಂಟಿಂಗ್ ಕೆಲಸ ಮಾಡುತ್ತಿದ್ದರು.

ಈ ವೇಳೆ ಹರ್ಷಿತ್ ಕುಮಾರ್ ಏಣಿ ಹತ್ತಿ ಗೋಡೆಗೆ ಪೈಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಪೆಟ್ರೋಲ್ ಹಾಕಲು ಬಂದ ಕಾರು ಏಣಿಗೆ ಢಿಕ್ಕಿ ಹೊಡೆದು ಗಾಯಗೊಂಡಿದ್ದಾರೆ.

Leave a Reply

Your email address will not be published. Required fields are marked *