ಎಕ್ಕೂರಿನಲ್ಲಿ ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿ ಪಲ್ಟಿ

ಮಂಗಳೂರು: ಮರದ ದಿಮ್ಮಿಗಳನ್ನು ಹೊತ್ತ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಘಟನೆ ಮಂಗಳೂರಿನ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರಿನಲ್ಲಿ ಸೆ.13 ರಂದು ಮಧ್ಯಾಹ್ನದ ವೇಳೆ ನಡೆದಿದೆ.

ಮರದ ದಿಮ್ಮಿಗಳನ್ನು ಹೊತ್ತ ಲಾರಿ ಮಂಗಳೂರು ಕಡೆಯಿಂದ ತಲಪಾಡಿ ಕಡೆಗೆ ಸಾಗುತ್ತಿದ್ದು ಈ ವೇಳೆ ಎಕ್ಕೂರು ಬಳಿ ಇಳಿಜಾರು ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ ಎನ್ನಲಾಗಿದೆ.

ಪರಿಣಾಮ ಮರದ ದಿಮ್ಮಿಗಳು ರಸ್ತೆ ತುಂಬಾ ಹರಡಿ ಸ್ವಲ್ಪ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು.

ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *