Breaking
10 May 2026, Sun

ಸೆ.14 ರಂದು ಸಿದ್ದಕಟ್ಟೆ ಯಕ್ಷಮಿತ್ರರು ಶ್ರೀ ಕ್ಷೇತ್ರ ಪೂಂಜ ಇದರ ಸಂಸ್ಮರಣೆ, ಪ್ರಶಸ್ತಿ ಪ್ರದಾನ, ತಾಳಮದ್ದಳೆ ಕಾರ್ಯಕ್ರಮ

ಬಂಟ್ವಾಳ: ತಾಲೂಕಿನ ಸಿದ್ದಕಟ್ಟೆ ಯಕ್ಷಮಿತ್ರರು ಶ್ರೀ ಕ್ಷೇತ್ರ ಪೂಂಜ ಇದರ 8 ನೇ ವಾರ್ಷಿಕೋತ್ಸವ ಪ್ರಯುಕ್ತ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಹಾಗೂ ತಾಳಮದ್ದಳೆ ಕಾರ್ಯಕ್ರಮ ಸೆ.14ರಂದು ಸಿದ್ದಕಟ್ಟೆ ಫಲ್ಗುಣಿ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಜರಗಲಿದೆ.

ಮಧ್ಯಾಹ್ನ 2 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಬಣ್ಣದ ವೇಷದಾರಿ ದಿ.ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ ಅವರ ಸಂಸ್ಮರಣೆಯನ್ನು ಹಿರಿಯ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ನಡೆಸಿಕೊಡಲಿದ್ದಾರೆ.

ಹವ್ಯಾಸಿ ಯಕ್ಷಗಾನ ಕಲಾವಿದ ರಮೇಶ್ ಶೆಟ್ಟಿ ಪೆರಿಂಜೆ ಅವರಿಗೆ ಯಕ್ಷ ಮಿತ್ರ ಪ್ರಶಸ್ತಿ ಪ್ರದಾನ ನಡೆಸಲಾಗುವುದು.

ಬಳಿಕ ಇಂದ್ರಜಿತು ಕಾಳಗ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. ದುರ್ಗಾದಾಸ್ ಶೆಟ್ಟಿ ಕರಿಂಕಿಜೆ ಕಾರ್ಯಕ್ರಮ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಕ್ಷೇತ್ರ ಪೂಂಜದ ಆಸ್ರಣ್ಣ ಕೃಷ್ಣಪ್ರಸಾದ್ ಆಚಾರ್ಯ,ಶ್ರೀ ಕ್ಷೇತ್ರದ ಪ್ರ.ಅರ್ಚಕ ಪ್ರಕಾಶ್ ಆಚಾರ್ಯ ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ಸಮಿತಿ ಎಂದು ಪ್ರಕಟನೆ ತಿಳಿಸಿದೆ.

Leave a Reply

Your email address will not be published. Required fields are marked *