Breaking
19 Sep 2026, Sat

ಬೆಂಕಿಗಾಹುತಿಯಾದ ಬಿಎಂಟಿಸಿ ಬಸ್‌ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಬೆಂಗಳೂರು : ನಗರದ ಹೆಚ್ಎಎಲ್ ಮುಖ್ಯದ್ವಾರದ ಬಳಿ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಬಸ್‌ ಸುಟ್ಟು ಕರಕಲಾಗಿರುವ ಘಟನೆ ಬೆಳಗ್ಗಿನ ಜಾವ 5:10 ಕ್ಕೆ ನಡೆದಿದೆ.

ಮೆಜೆಸ್ಟಿಕ್‌ನಿಂದ ಕಾಡುಗೋಡಿಗೆ ತೆರಳುತ್ತಿದ್ದ ಬಸ್‌ ನಲ್ಲಿ ಸುಮಾರು 75 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.

ಬಸ್‌ ಚಲಿಸುತ್ತಿದ್ದಂತೆ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಇದರಿಂದ ಎಚ್ಚೆತ್ತ ಚಾಲಕ, ನಿರ್ವಾಹಕರು ತಕ್ಷಣ ಪ್ರಯಾಣಿಕರನ್ನ ಕೆಳಗಿಳಿಸಿದ್ದಾರೆ. ಕ್ರಮೇಣ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡು ಬಸ್‌ ಧಗಧಗಿಸಿದೆ. ಚಾಲಕನ ಸಮಯಪ್ರಜ್ಷೆಯಿಂದ 75 ಪ್ರಯಾಣಿಕರು ಸುರುಕ್ಷಿತರಾಗಿದ್ದಾರೆ.

ಬಳಿಕ ಹೆಚ್ಎಲ್ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

Leave a Reply

Your email address will not be published. Required fields are marked *