ಮಂಗಳೂರು: ಕೆಂಪುಕಲ್ಲು ಮತ್ತು ಮರಳಿನ ತೀವ್ರ ಕೊರತೆ ವಿರೋಧಿಸಿ ಮಂಗಳೂರು ನಗರದ ಮಿನಿ ವಿಧಾನಸೌಧದ ಎದುರು ಇಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಧರಣಿ ನಡೆಯಲಿದೆ.

ಈ ಕುರಿತು ಕ್ಯಾ.ಚೌಟ ಆಕ್ರೋಶ ವ್ಯಕ್ತಪಡಿಸಿದ್ದು ರಾಜ್ಯ ಕಾಂಗ್ರೆಸ್ ಸರ್ಕಾರದ ಈ ನಿರ್ಲಕ್ಷ್ಯ ಹಾಗೂ ನಿರ್ಲಜ್ಜ ಧೋರಣೆಯಿಂದ ಸಾವಿರಾರು ಕೂಲಿ ಕಾರ್ಮಿಕರ ಕುಟುಂಬದ ಬದುಕು ಬೀದಿಗೆ ಬಿದ್ದಿದೆ. ಕಟ್ಟಡ ನಿರ್ಮಾಣ ವಲಯದಲ್ಲಿ ನೂರಾರು ಕೋಟಿ ರೂಪಾಯಿಗಳ ನಷ್ಟ ಉಂಟಾಗಿದೆ. ಕೆಂಪುಕಲ್ಲು ಗಣಿಗಾರಿಕೆಗೆ ಇಲ್ಲಸಲ್ಲದ ನಿರ್ಬಂಧ ಹೇರಿ ಬಳಿಕ ಸಮಸ್ಯೆ ಬಗೆಹರಿಸುವುದಾಗಿ ಕಾಂಗ್ರೆಸ್ ಸರ್ಕಾರ ಕಳೆದ ಮೂರು ತಿಂಗಳಿಂದ ಬರೀ ಪೊಳ್ಳು ಭರವಸೆಗಳನ್ನು ನೀಡುತ್ತಾ ಕಾಲಹರಣ ಮಾಡುತ್ತಿದೆ ಎಂದು ಕ್ಯಾ.ಚೌಟ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬೃಹತ್ ಪ್ರತಿಭಟನಾ ಧರಣಿಯಲ್ಲಿ ಬಿಜೆಪಿ ನಾಯಕರು, ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೆ ಸರ್ಕಾರದ ಜನವಿರೋಧಿ ನಿರ್ಧಾರಗಳಿಂದ ಬಾಧಿತರಾಗಿರುವವರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಈ ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ಕ್ಯಾ. ಚೌಟ ಮಾಧ್ಯಮಗಳ ಮೂಲಕ ಕರೆ ನೀಡಿದ್ದಾರೆ.



