Breaking
29 Jun 2026, Mon

ಸ್ಕೂಟರ್ ನಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ: ಮಣಿಪಾಲದಲ್ಲಿ ಆರೋಪಿ ಅರೆಸ್ಟ್

ಉಡುಪಿ: ಸ್ಕೂಟರ್ನಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಣಿಪಾಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕಾಪು ತಾಲೂಕಿನ ಬೆಳಪು ಗ್ರಾಮದ ವಿಜಯ ನಗರ ನಿವಾಸಿ ಮಹಮ್ಮದ್ ಅರ್ಫಾನ್(26) ಎಂದು ಗುರುತಿಸಲಾಗಿದೆ.

ಆರೋಪಿಯನ್ನು ಸೆ.15ರಂದು ಮಣಿಪಾಲದ ವಿದ್ಯಾರತ್ನ ನಗರದ ಜಿಲ್ಲಾಧಿಕಾರಿ ಕಚೇರಿ ರಸ್ತೆಯ ನಂದಿನಿ ಮಿಲ್ಕ್ ಪಾರ್ಲರ್ ಬಳಿ ಬಂಧಿಸಲಾಗಿದೆ. ಈತನಿಂದ 13,000ರೂ. ಮೌಲ್ಯದ 6.61 ಗ್ರಾಂ ಮಾದಕ ವಸ್ತು ಎಂಡಿಎಂಎ, ಕೃತ್ಯಕ್ಕೆ ಬಳಸಿದ ಸ್ಕೂಟರ್, 60ಸಾವಿರ ರೂ. ಮೌಲ್ಯದ ಎರಡು ಮೊಬೈಲ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *