ವಿಜಯನಗರ: ಬೆಂಗಳೂರಿಗೆ ಹೊರಟ್ಟಿದ್ದ ಸ್ಲೀಪರ್ ಬಸ್ ಹಾಗೂ ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾನಾಹೊಸಹಳ್ಳಿ ಸಮೀಪದ ಬಿಷ್ಣಹಳ್ಳಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಇಂದು ಮಂಜಾನೆಯ ವೇಳೆ ನಡೆದಿದೆ.

ಮನೋಜ್( 28) ಸುರೇಶ್ ( 45) ಎಂಬವರು ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಮುದಗಲ್ ನಿಂದ ಬೆಂಗಳೂರು ಕಡೆ ಹೊರಟಿದ್ದ ಖಾಸಗಿ ಬಸ್ ಬಿಷ್ಟಹಳ್ಳಿ ಕ್ರಾಸ್ ಬಳಿ ಲಾರಿಯನ್ನು ಓವರ್ ಟೆಕ್ ಮಾಡಲು ಹೋಗಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ..



