Breaking
29 Jun 2026, Mon

ಪುತ್ತೂರಿನಲ್ಲಿ ಪುರೋಹಿತ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಅನಾರೋಗ್ಯದಿಂದ ನೊಂದ ವ್ಯಕ್ತಿಯೊಬ್ಬರು ಆತ್ಮ ಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಕುರಿಯ ಗ್ರಾಮದ ಕೈಂತಿಲ ಎಂಬಲ್ಲಿ ನಡೆದಿದೆ.

ಮೃತರನ್ನು ಸ್ಥಳೀಯ ನಿವಾಸಿ ಪುರೋಹಿತ ಸುರೇಶ್ ನಕ್ಷತ್ರಿತ್ತಾಯ (49) ಎಂದು ಗುರುತಿಸಲಾಗಿದೆ.

ವಿಪರೀತ ಹೊಟ್ಟೆನೋವಿನಿಂದ ಬಳಲುತ್ತಿದ್ದ ಅವರು ನೋವು ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂತ ಹೇಳಲಾಗುತ್ತಿದೆ.

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *