ಸುಳ್ಯ: ಬೆಳ್ಳಾರೆ ಸಮೀಪದ ಅಯ್ಯನಕಟ್ಟೆಯಲ್ಲಿ ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ತಂಬಿನಮಕ್ಕಿಯ ರಾಮ ಎಂದು ಗುರುತಿಸಲಾಗಿದೆ.

ಅಯ್ಯನಕಟ್ಟೆಯ ಗೋಕುಲಂ ಎದುರುಗಡೆ ಇರುವ ಸಿದ್ದಿಕ್ ಎಂಬರಿಗೆ ಸೇರಿದ ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಈ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



