ಮಂಗಳೂರು : ಮಂಗಳೂರು ಸೆಂಟ್ರಲ್- ಸುಬ್ರಹ್ಮಣ್ಯ ರೈಲು ನಿಲ್ದಾಣಗಳ ನಡುವಿನ ಹಳಿ ವಿದ್ಯುದೀಕರಣ ಯೋಜನೆ ಪೂರ್ಣಗೊಂಡಿದ್ದು ಸೆ.15ರಂದು ವಿದ್ಯುತ್ ಚಾಲಿತ ಪ್ಯಾಸೆಂಜರ್ ರೈಲುಗಳ ಓಡಾಟ ಆರಂಭಗೊಂಡಿದೆ.
ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ವಿದ್ಯುತ್ ಚಾಲಿತ ರೈಲು (ನಂ. 56625/26, 56627/28 ಮತ್ತು 56629/30) ಓಡಾಟ ನಡೆಸಲಿದೆ. ಈ ಮೂಲಕ ಅನೇಕರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.





