Breaking
24 Mar 2026, Tue

ಸೆ. 25 ರಂದು ಧರ್ಮಸ್ಥಳ ದೌರ್ಜನ್ಯ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ನ್ಯಾಯ ಸಮಾವೇಶ

ಧರ್ಮಸ್ಥಳ: ಗ್ರಾಮದಲ್ಲಿ ನಡೆದಿರುವ ಅಸಹಜ ಸಾವುಗಳು , ಅತ್ಯಾಚಾರ , ಕೊಲೆ , ಭೂ ಮಾಫಿಯಾ ,ಮೈಕ್ರೋ ಫೈನಾನ್ಸ್ ದೌರ್ಜನ್ಯಗಳ ಬಗ್ಗೆ ತನಿಖೆಗೆ ಒತ್ತಾಯಿಸಿ ಸೆ. 25 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ನ್ಯಾಯ ಸಮಾವೇಶ ನಡೆಯಲಿದೆ.

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಎಲ್ಲಾ ಅಸಹಜ ಸಾವುಗಳು , ಅತ್ಯಾಚಾರ , ಕೊಲೆ ಪ್ರಕರಣಗಳನ್ನು ಎಸ್ಐಟಿ ತನಿಖೆಗೆ ಒಳಪಡಿಸಬೇಕು , ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಭೂ ಮಾಫಿಯಾ , ಮೈಕ್ರೋ ಫೈನಾನ್ಸ್ ಅಕ್ರಮ , ದೌರ್ಜನ್ಯಗಳ ಬಗ್ಗೆ ತನಿಖೆಗೆ ಪ್ರತ್ಯೇಕ ಸಮಿತಿ ರಚಿಸಬೇಕು , ಎಸ್ಐಟಿ ತಂಡಕ್ಕೆ ಪೂರ್ಣ ಸ್ವಾತಂತ್ರ್ಯ ನೀಡಬೇಕು ಮತ್ತು ಎಸ್ಐಟಿ ತನಿಖೆಯನ್ನು ಹಾದಿ ತಪ್ಪಿಸುವ ರಾಜಕೀಯ ಷಡ್ಯಂತ್ರಗಳನ್ನು ತಕ್ಷಣ ನಿಲ್ಲಿಸಬೇಕೆಂದು ಒತ್ತಾಯಿಸಿ ರಾಜ್ಯದ ಎಡ ,ದಲಿತ, ಆದಿವಾಸಿ ,ಕಾರ್ಮಿಕ , ರೈತ , ವಿದ್ಯಾರ್ಥಿ, ಯುವಜನ , ಮಹಿಳಾ, ಸಾಂಸ್ಕೃತಿಕ ಸಂಘಟನೆಗಳ ಜಂಟಿ ವೇದಿಕೆಯಾದ ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ನೇತೃತ್ವದಲ್ಲಿ ಈ ನ್ಯಾಯ ಸಮಾವೇಶ ಸಪ್ಟೆಂಬರ್ 25 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಖ್ಯಾತ ಹೋರಾಟಗಾರ್ತಿ , ಮಾಜಿ ಸಂಸದೆ ಸುಭಾಷಿನಿ ಅಲಿ ಭಾಗವಹಿಸಲಿದ್ದು , ಜಿಲ್ಲೆಯ ನ್ಯಾಯಪ್ರೀಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ , ಈ ಐತಿಹಾಸಿಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ , ಸಾಮಾಜಿಕ ಹೋರಾಟಗಾರ ಶೇಖರ್ ಲಾಯಿಲ ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *