Breaking
24 Mar 2026, Tue

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ವಿರೋಧ: ಪಿಐಎಲ್‌ ವಜಾ

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಬುಕ‌ರ್ ಪುರಸ್ಕೃತ ಲೇಖಕಿ ಬಾನು ಮುಷ್ಕಾಕ್ ಅವರನ್ನು ಆಹ್ವಾನಿಸಿರುವ ರಾಜ್ಯ ಸರಕಾರದ ಕ್ರಮವನ್ನು ಪ್ರಶ್ನಿಸಿ ಅನೇಕರು ತಕರಾರು ಮಾಡಿದ್ದರು.

ಈ ಬಗ್ಗೆ ಮಾಜಿ ಸಂಸದ ಪ್ರತಾಪ ಸಿಂಹ, ಗಿರೀಶ್ ಕುಮಾರ್ ಮತ್ತು ಗೌರವ್ ಎಂಬವರು ಪ್ರತ್ಯೇಕ 3 ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ದರು. ಈ ಮೂವರೂ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಪೀಠ ವಜಾ ಮಾಡಿದೆ.

ಸೆ.15 ರಂದು ಮುಖ್ಯ ನ್ಯಾ | ವಿಭು ಬಖ್ರು ಹಾಗೂ ನ್ಯಾ| ಸಿ.ಎಂ.ಜೋಷಿ ಅವರ ವಿಭಾಗೀಯ ನ್ಯಾಯಪೀಠವು ಪ್ರತಾಪ್ ಸಿಂಹ ಮತ್ತು ಮೂವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದೆ.

ನಾಡಹಬ್ಬ ದಸರಾ ಹಿಂದೂ ಧಾರ್ಮಿಕ ಸಂಪ್ರದಾಯ, ಆಚರಣೆಯ ಅವಿಭಾಜ್ಯ ಅಂಗವಾಗಿದೆ. ಹಾಗಿರುವಾಗ ಹಿಂದೂ ಅಲ್ಲದ ಬಾನು ಮುಸ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವುದನ್ನು ಹಿಂಪಡೆಯುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಆಗ್ರಹಿಸಲಾಗಿತ್ತು. ಆದರೆ ಸರ್ಕಾರದ ನಿರ್ಧಾರದಿಂದ ಅರ್ಜಿದಾರರ ಯಾವುದೇ ಕಾನೂನಾತ್ಮಕ ಅಥವಾ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆ ಆಗುತ್ತಿಲ್ಲ ಎಂದು ಹೇಳಿರುವ ಹೈಕೋರ್ಟ್, ಅರ್ಜಿಗಳನ್ನು ವಜಾಗೊಳಿಸಿ ಆದೇಶಿಸಿದೆ.

ಅರ್ಜಿದಾರರಿಗೆ ದಂಡ ವಿಧಿಸುವಂತೆ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಾಡಿದರು. ಆದರೆ ಇದಕ್ಕೆ ಪೀಠ ನಿರಾಕರಿಸಿತು.

Leave a Reply

Your email address will not be published. Required fields are marked *