ಬೆಂಗಳೂರು: ಬೆಂಗಳೂರಿನ ಕೆಲವು ಕಾಲೇಜುಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ.
ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿಎಂಎಸ್ ಕಾಲೇಜು, ವಿ.ವಿ.ಪುರಂನಲ್ಲಿರುವ ಬಿಐಟಿ ಕಾಲೇಜು ಸೇರಿದಂತೆ ಕೆಲವು ಕಾಲೇಜುಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಪತ್ರ ಬಂದಿದೆ. ಕೂಡಲೇ ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕಿಯ ಸಿಬ್ಬಂದಿ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಇನ್ನು ಮುಂಜಾಗೃತ ಕ್ರಮವಾಗಿ ಪೊಲೀಸರು ಮೂರು ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯನ್ನು ಹೊರಕ್ಕೆ ಕಳುಹಿಸಿದ್ದಾರೆ. ಸದ್ಯ ಪರಿಶೀಲನೆ ಮುಂದುವರೆದಿದೆ.
ಇದೇ ಸೆ.28 ರಂದು ಬೆಂಗಳೂರಿನ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೆಲ್ ಹಾಗೂ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಹೋಟೆಲ್ ಒಟೆರಾ ಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದರು. ಇದಾದ ಆರು ದಿನಗಳ ಬಳಿಕ ಬೆಂಗಳೂರಿನ ಕೆಲವು ಕಾಲೇಜುಗಳಿಗೆ ಇ-ಮೇಲ್ ಮುಖಾಂತರ ಬಾಂಬ್ ಬೆದರಿಕೆ ಬಂದಿದೆ.