Breaking
24 Mar 2026, Tue

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕ ಸಸ್ಪೆಂಡ್

ತೆಲಂಗಾಣ: ವಿದ್ಯಾರ್ಥಿನಿಯೋರ್ವಳು ತನ್ನ ಶಿಕ್ಷಕನ ಮೇಲೆ ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದು, ಪೋಕ್ಸೊ ಪ್ರಕರಣ ದಾಖಲಾಗಿ ಶಿಕ್ಷಕನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ತೆಲಂಗಾಣದ ನಲ್ಗೊಂಡ ಜಿಲ್ಲೆಯ ನಕ್ರೆಕಲ್‌ನಲ್ಲಿರುವ ಜಿಲ್ಲಾ ಪರಿಷತ್ ಪ್ರೌಢಶಾಲೆಯ 10 ನೇ ತರಗತಿಯ ವಿದ್ಯಾರ್ಥಿನಿಯೋರ್ವಳು, ತನ್ನ ಇಂಗ್ಲಿಷ್ ಶಿಕ್ಷಕ ಕಳೆದ ಮೂರು ತಿಂಗಳಿನಿಂದ ಲೈಂಗಿಕ ಕಿರುಕುಳ ನೀಡುತ್ತಿದ್ದು, ಇದರಿಂದ ತೀವ್ರ ಮಾನಸಿಕ ತೊಂದರೆ ಅನುಭವಿಸುತ್ತಿರುವುದಾಗಿ ಆರೋಪಿಸಿದ್ದಾಳೆ.

ವಿದ್ಯಾರ್ಥಿನಿ ತನ್ನ ತಂದೆಯಲ್ಲಿ ಕಿರುಕುಳದ ಬಗ್ಗೆ ಹೇಳಿಕೊಂಡಾಗ ವಿಷಯ ಬೆಳಕಿಗೆ ಬಂದಿದ್ದು, ನಂತರ, ಪೋಷಕರು ಮಾಮಿಡಿ ಶ್ರೀನಿವಾಸ್ ಎಂದು ಗುರುತಿಸಲಾದ ಶಿಕ್ಷಕನ ವಿರುದ್ಧ ಪೊಲೀಸರಿಗೆ ಔಪಚಾರಿಕ ದೂರು ದಾಖಲಿಸಿದರು.

ದೂರಿನ ಮೇರೆಗೆ ಶ್ರೀನಿವಾಸ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಶಿಕ್ಷಣ ಇಲಾಖೆ ಅವರನ್ನು ಸೇವೆಯಿಂದ ಅಮಾನತುಗೊಳಿಸಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *