ಚಿಕ್ಕಬಳ್ಳಾಪುರ: ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತರ ಮೇಲೆ ಕರಡಿ ದಾಳಿ ಮಾಡಿ ಇಬ್ಬರು ರೈತರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಹೋಬಳಿಯ ಗುರುಕಲನಾಗೇನಹಳ್ಳಿ ಗ್ರಾಮದ ಸಮೀಪ ಇಂದು( ಸೆ.16) ಬೆಳಿಗ್ಗೆ ನಡೆದಿದೆ.

ಗಾಯಾಗೊಂಡವರನ್ನು ಚಿಕ್ಕಬಳ್ಳಾಪುರ ತಾಲೂಕಿನ ಬಾಲಕುಂಟಳ್ಳಿಯ ಕೃಷ್ಣ ಹಾಗೂ ಗುರುಕಲ ನಾಗೇನಹಳ್ಳಿ ಗ್ರಾಮದ ನರಸಿಂಹಮೂರ್ತಿ ಎಂದು ಗುರುತಿಸಲಾಗಿದೆ.
ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸದ್ಯ ರೈತರಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಚಿಕ್ಕಬಳ್ಳಾಪುರ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




