Breaking
29 Jun 2026, Mon

ಕಾಸರಗೋಡುವಿನ ಬಂದಡ್ಕದಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

ಕಾಸರಗೋಡು : ಬಾಲಕಿಯೊಬ್ಬಳು ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡುವಿನ ಬಂದಡ್ಕದಲ್ಲಿ ನಡೆದಿದೆ.

ಬಂದಡ್ಕ ಊತಡ್ಕದ ಸವಿತಾ ಎಂಬವರ ಪುತ್ರಿ ದೇವಿಕಾ (15) ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಬಾಲಕಿಯಾಗಿದ್ದಾಳೆ. ಈಕೆ ಕುಂಡಂಗುಳಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ 10 ನೇ ತರಗತಿಯಲ್ಲಿ ಕಲಿಯುತ್ತಿದ್ದಳು.

ಬೆಳಿಗ್ಗೆ ದೇವಿಕಾ ನಾಪತ್ತೆಯಾದ ಹಿನ್ನಲೆಯಲ್ಲಿ ಸಹೋದರ ಶೋಧ ನಡೆಸಿದಾಗ ಸೀರೆಯಿಂದ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಬೇಡಡ್ಕ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *