ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದಾರನಾಗಿ ಬಳಿಕ ಆರೋಪಿಯಾಗಿ ಸದ್ಯ ಶಿವಮೊಗ್ಗದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಜಾಗೊಂಡಿದೆ.
ಆರೋಪಿ ಚಿನ್ನಯ್ಯನ ಪ್ರಕರಣ ಗಂಭೀರವಾಗಿದ್ದು, ಪ್ರಕರಣದ ತನಿಖೆ ಜಿಲ್ಲಾ ಸೆಕ್ಷನ್ ಕೋರ್ಟ್ ಆಗಿದ್ದು, ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಇನ್ನೂ ಹೆಚ್ಚಿನ ತನಿಖೆ ಮಾಡುವ ಅವಶ್ಯಕತೆ ಇದೆ ಎಂದು ಸೆ.16 ರಂದು ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ನ್ಯಾಯಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ವಿಜಯೇಂದ್ರ ಟಿ.ಎಚ್ ಜಾಮೀನು ಅರ್ಜಿ ವಜಾ ಮಾಡಿ ಆದೇಶ ನೀಡಿದ್ದಾರೆ.

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತುಹಾಕಿರುವುದಾಗಿ ಹೇಳಿ ಬುರುಡೆ ಜೊತೆಗೆ ಬೆಳ್ತಂಗಡಿ ಠಾಣೆಗೆ ಹಾಜರಾಗಿದ್ದ ಚಿನ್ನಯ್ಯನ ಪ್ರಕರಣಕ್ಕೆ ಹಲವಾರು ಬೆಳವಣಿಗೆಯ ಬಳಿಕ ಎಸ್ ಐ ಟಿ ಪ್ರವೇಶ ಪಡೆಯಿತು.
ನಂತರ ಎಸ್ ಐಟಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಹೇಳಿದ ಸ್ಥಳಗಳಲ್ಲಿ ಉತ್ಖನನ ನಡೆಸಿ ಹೆಚ್ಚಿನ ತನಿಖೆಗಾಗಿ ಆತನನ್ನು ಕಸ್ಟಡಿಗೆ ಪಡೆದು ಸೆ.06ರಂದು ನ್ಯಾಯಾಲಯಕ್ಕೆ ಹಾಜರು ಪಡೆಸಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು.

ಚಿನ್ನಯ್ಯ ಪರ ಜಿಲ್ಲಾ ಉಚಿತ ಕಾನೂನು ಸೇವೆಗಳ ಪ್ರಾಧಿಕಾರದಿಂದ ವಕೀಲರನ್ನು ಪಡೆದುಕೊಂಡು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು.
ಸೆ. 12 ಕ್ಕೆ ಜಾಮೀನು ಅರ್ಜಿ ವಾದ ಮಾಡಿ ಸೆ.16ಕ್ಕೆ ಜಾಮೀನು ಅರ್ಜಿ ಆದೇಶಕ್ಕೆ ನಿಗದಿಪಡಿಸಿದ್ದರು. ಸದ್ಯ ಅರ್ಜಿ ವಜಾಗೊಂಡಿದೆ.



