Breaking
24 Mar 2026, Tue

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ: ಹಿರಿಯ ಅಧಿಕಾರಿಗಳು ಸೇರಿದಂತೆ 9 ಮಂದಿ ಅರೆಸ್ಟ್

ಕಾಸರಗೋಡು : 16 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶೈಕ್ಷಣಿಕ ಅಧಿಕಾರಿ ಮತ್ತು ರೈಲ್ವೆ ರಕ್ಷಣಾ ಪಡೆ ಅಧಿಕಾರಿ ಸೇರಿದಂತೆ ಒಂಬತ್ತು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಎಲ್‌ಜಿಬಿಟಿಕ್ಯೂ ಸಮುದಾಯದ ಡೇಟಿಂಗ್ ಆ್ಯಪ್‌ನ ಮೂಲಕ ಪರಿಚಯಗೊಂಡ 16 ವರ್ಷದ ಬಾಲಕನಿಗೆ ನಿರಂತರ ಕಿರುಕುಳ ನೀಡಿದ ಘಟನೆ ನಡೆದಿದ್ದು, ಅಪರಿಚಿತ ವ್ಯಕ್ತಿಗಳು ಬಾಲಕನನ್ನು ಫೋನ್ ಮೂಲಕ ಸಂಪರ್ಕಿಸಿ ಭೇಟಿ ನೀಡುತ್ತಿರುವುದನ್ನು ಅವನ ತಾಯಿ ಗಮನಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ.

ಬಳಿಕ ಅವರು ಪೊಲೀಸರನ್ನು ಸಂಪರ್ಕಿಸಿದ್ದು, ಅವರು ಚೈಲ್ಡ್‌ಲೈನ್‌ಗೆ ಮಾಹಿತಿ ನೀಡಿದರು. ನಂತರ, ಚೈಲ್ಡ್‌ಲೈನ್ ಅಧಿಕಾರಿಗಳು ಕೌನ್ಸೆಲಿಂಗ್ ಏರ್ಪಡಿಸಿ ಬಾಲಕ ಎದುರಿಸಿದ ದೌರ್ಜನ್ಯವನ್ನು ತಿಳಿದುಕೊಂಡು ನಂತರ ಪ್ರಕರಣ ದಾಖಲಿಸಿದರು.

ಕಾಸರಗೋಡು, ಕಣ್ಣೂರು, ಕೋಯಿಕ್ಕೋಡ್ ಮತ್ತು ಎರ್ನಾಕುಲಂ ಜಿಲ್ಲೆಗಳಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ ಒಟ್ಟು 16 ಪ್ರಕರಣಗಳಲ್ಲಿ 16 ಆರೋಪಿಗಳ ವಿರುದ್ಧ ಆರೋಪ ಹೊರಿಸಲಾಗಿದೆ ಎಂದು ಚಂದೇರಾ ಪೊಲೀಸರು ತಿಳಿಸಿದ್ದಾರೆ.

ಒಟ್ಟು 16 ಪ್ರಕರಣಗಳಲ್ಲಿ 10 ಪ್ರಕರಣಗಳು ಚಂದೇರಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಉಳಿದ ಆರು ಪ್ರಕರಣಗಳು ಕಣ್ಣೂರಿನ ಪಯ್ಯನೂರು ಠಾಣೆ, ಕೋಝಿಕ್ಕೋಡ್‌ನ ಕಸಬಾ ಠಾಣೆ ಮತ್ತು ಎರ್ನಾಕುಲಂನ ಎಲಮಕ್ಕರ ಠಾಣೆಯಲ್ಲಿ ದಾಖಲಾಗಿವೆ ಎಂದು ಕಾಸರಗೋಡು ಎಸ್‌ಪಿ ವಿ.ವಿ. ವಿಜಯ ರೆಡ್ಡಿ ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಬಿಎನ್‌ಎಸ್ ಸೆಕ್ಷನ್ 377 ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *