Breaking
20 Sep 2026, Sun

ಆಕಸ್ಮಿಕವಾಗಿ ಹೊತ್ತಿ ಉರಿದ ಕಾರು: ಯುವಕ ಸಜೀವ ದಹನ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಅರಳೀಕಟ್ಟೆ ಗ್ರಾಮದಲ್ಲಿ ಆಕಸ್ಮಿಕವಾಗಿ ಕಾರು ಹೊತ್ತಿ ಉರಿದು ಯುವಕ ಸಜೀವ ದಹನಗೊಂಡ ಘಟನೆ ನಡೆದಿದೆ.

ಮೃತರನ್ನು ಸಿದ್ದೇಶ್ವರ್ (35) ಎಂದು ಗುರುತಿಸಲಾಗಿದೆ.

ಹಿರಿಯೂರಿನಿಂದ ಅರಳೀಕಟ್ಟೆಗೆ ಟಾಟಾ ನೆಕ್ಸಾನ್ ಕಾರಿನಲ್ಲಿ ಮರಳುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಸಿದ್ದೇಶ್ವರ್ ಸಜೀವವಾಗಿ ದಹನಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *