Breaking
29 Jun 2026, Mon

ಸ್ಕೂಟರ್‌ ಹಾಗೂ ವ್ಯಾನ್‌ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಕಾಸರಗೋಡು: ಸ್ಕೂಟರ್ ಹಾಗೂ ವ್ಯಾನ್ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಉಪ್ಪಳ ಸಮೀಪದ ಬಾಯಾರು ಎಂಬಲ್ಲಿ ಇಂದು(ಸೆ. 17) ಬೆಳಿಗ್ಗೆ ನಡೆದಿದೆ.

ಗಾಯಗೊಂಡ ವಿದ್ಯಾರ್ಥಿಗಳನ್ನು ಪೈವಳಿಕೆ ಕಳಾಯಿಯ ಮುಹಮ್ಮದ್ ಸಾದಿಕ್ ಮತ್ತು ಮುಹಮ್ಮದ್ ಮೊಯ್ದೀನ್ ಎಂದು ಗುರುತಿಸಲಾಗಿದ್ದು, ಪೈವಳಿಕೆ ಖಾಸಗಿ ಶಾಲೆಯ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

ಬಾಯಾರು ಪೆಟ್ರೋಲ್ ಬಂಕ್ ಬಳಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣವೇ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಮಂಜೇಶ್ವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *