Breaking
23 Mar 2026, Mon

ಬೆಳ್ತಂಗಡಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಬಿಜೆಪಿ

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 75ನೇ ವರ್ಷದ ಹುಟ್ಟುಹಬ್ಬ ಸೆ.17 ರಂದು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.

ಈ ನಿಟ್ಟಿನಲ್ಲಿ ತಾಲೂಕಿನಲ್ಲಿರುವ ಕಳೆಂಜ ನಂದಗೋಕುಲ ಗೋಶಾಲೆಗೆ ರೂ.10,000/- ಧನಸಹಾಯ ಹಾಗೂ ಎರಡು ಅಶಕ್ತ ಕುಟುಂಬಗಳಾದ ಕುವೆಟ್ಟು ಗ್ರಾಮದ ನೆರೋಲ್ ಕಟ್ಟೆ ಹೊನ್ನಪ್ಪ ಪೂಜಾರಿ ಹಾಗೂ ಪಡಂಗಡಿ ಗ್ರಾಮ ಬರಾಯ ದಿನೇಶ್ ಆಚಾರ್ಯ ಅಶಕ್ತ ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚಾ ಮಂಡಲ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ. ಕುವೆಟ್ಟು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಪ್ರದೀಪ್, ಪಂಚಾಯತ್ ಸದಸ್ಯೆ ಸುಮಂಗಲ ಪ್ರಭು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *