Breaking
12 May 2026, Tue

ನಿಷೇಧಿತ ಮಾದಕ ವಸ್ತು ಮಾರಾಟಕ್ಕೆ ಯತ್ನ: ಆರೋಪಿ ಪೊಲೀಸ್‌ ವಶಕ್ಕೆ

ಉಡುಪಿ: ಮಾದಕ ವಸ್ತು ಎಂ.ಡಿ.ಎಂ.ಎ ಹಾಗೂ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೋರ್ವನನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಉಡುಪಿಯ ಮೂಡನಿಡಂಬೂರಿನ ನಿವಾಸಿ ಇಕ್ಬಾಲ್ (33) ಎಂದು ಗುರುತಿಸಲಾಗಿದೆ.

ಇಕ್ಬಾಲ್ ತನ್ನ ಬಳಿ ಮಾದಕ ವಸ್ತುಗಳನ್ನು ಇರಿಸಿಕೊಂಡಿದ್ದು, ಈ ಬಗ್ಗೆ ಪೊಲೀಸರು ವಿಚಾರಿಸಿದಾಗ ಉಡುಪಿ-ಮಣಿಪಾಲ ಪ್ರದೇಶದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಅವುಗಳನ್ನು ತನ್ನ ಬಳಿ ಇರಿಸಿಕೊಂಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ಸದ್ಯ, ಪೊಲೀಸರು ಆರೋಪಿಯಿಂದ ಒಟ್ಟು 43,800 ರೂ. ಮೌಲ್ಯದ ಮಾದಕ ವಸ್ತುಗಳು ಮತ್ತು ಸಂಬಂಧಿತ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *